ಶೀಘ್ರದಲ್ಲೇ ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸ್ಸು-ಸಿಎಂ ಬೊಮ್ಮಾಯಿ. ಬೆಳಗಾವಿ , ಡಿಸೆಂಬರ್, 13,2021(..):ದಿವಂಗತ ನಟ ಪವರ್‍ ಸ್ಟಾರ್ ಪುನೀತ್‍ ರಾಜ್‍ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆ ಶೀಘ್ರದಲ್ಲೇ ಶಿಫಾರಸ್ಸು ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ಶೀಘ್ರದಲ್ಲೇ ನಿಗದಿ ಮಾಡಲಾಗುವುದು ಎಂದರು. ಅವರ ಅಭಿಮಾನಿಗಳು ಮತ್ತು ಎಲ್ಲರ ಒತ್ತಾಸೆಯಂತೆ ಕರ್ನಾಟಕ ರಾಜ್ಯ ಸರ್ಕಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿದೆ. ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ಚಿತ್ರೋದ್ಯಮದ ಗಣ್ಯರು ಮನವಿ ಮಾಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಈ ಬಗ್ಗೆ ಚರ್ಚಿಸಿ ಪದ್ಮಶ್ರೀ ಪ್ರಶಸ್ತಿಗೆ ಶೀಘ್ರದಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. : - - - -- .