ರಾಜಕೀಯ ದುರುದ್ಧೇಶದಿಂದ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮುಂದಾಗಿದ್ದಾರೆ- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ. ಬೆಳಗಾವಿ,ಡಿಸೆಂಬರ್13,2021(..):ರಾಜಕೀಯ ದುರುದ್ಧೇಶದಿಂದ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಮುಂದಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸರ್ಕಾರ ಮುಂದಾಗಿದೆ. ಈ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ರಾಜಕೀಯ ದುರುದ್ಧೇಶದಿಂದ ವಿಧೇಯಕ ಮಂಡನೆಗೆ ಮುಂದಾಗಿದ್ದಾರೆ.ಈ ಕಾಯ್ದೆ ಈಗ ಅಗತ್ಯವಿರಲಿಲ್ಲ. ಬಿಜೆಪಿಯವರು ಪ್ರಚಾರಕ್ಕಾಗಿ ಇವೆಲ್ಲಾ ಮಾಡುತ್ತಿದ್ದಾರೆ.ಒಂದು ಸಮುದಾಯ ಗುರಿಯಾಗಿಸಿ ಈ ರೀತಿ ಮಾಡುತ್ತಿರಿದ್ದಾರೆ. ಅನಗತ್ಯವಾಗಿ ಕಿರುಕುಳ ನೀಡಲು ಈ ರೀತಿ ಮಾಡಿದ್ದಾರೆ. ಅಧಿವೇಶನದಲ್ಲಿ ನಾವು ಈ ಕಾಯ್ದೆ ವಿರೋಧ ಮಾಡುತ್ತೇವೆ ಎಂದರು. ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದರೆ ಸ್ಪಂದಿಸಿಲ್ಲ. ಸರ್ಕಾರ ನಿದ್ಧೆ ಮಾಡುತ್ತಿದೆ. ವಾಡಿಕೆಗಿಂತ ಮೂರು ಪಟ್ಟು ಹೆಚ್ಚು ಮಳೆಯಾಗಿದೆ ಅತಿವೃಷ್ಠಿ ಜನರನ್ನ ಕಾಡುತ್ತಿದೆ. ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲ ಎಂದು ಸಿದ್ಧರಾಮಯ್ಯ ಕಿಡಿಕಾರಿದರು. : - - - - … - : , 13, 2021 (..): “ - ,” . - . , . “ . . . , ,” .“ ’ ’ . , . ,” .: / / / -