ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ: ಮತಾಂತರ ನಿಷೇಧ ಕಾಯಿದೆ ಮಂಡನೆ ಸುಳಿವು ನೀಡಿದ ಸಿಎಂ ಬೆಂಗಳೂರು, ಡಿಸೆಂಬರ್ 12, 2021 (..):2 ವರ್ಷಗಳ ಬಳಿಕ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ಬಾರಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯಾಗಬೇಕು ಎಂದು ಹೇಳಿದ್ದಾರೆ. ಯಾವುದೇ ಧರ್ಮದವರು ಆತಂಕ ಪಡುವ ಅಗತ್ಯವಿಲ್ಲ. ಬಡತನ, ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಳ್ಳಬಾರದು ಎಂದಿದ್ದಾರೆ. ಮತಾಂತರದಿಂದ ಬಡ ಕುಟುಂಬಗಳಿಗೆ ತೊಂದರೆಯಾಗುತ್ತೆ. ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಈ ನಿಟ್ಟಿನಲ್ಲಿ ಕಾನೂನು ಜಾರಿಯಾಗಬೇಕು ಎಂಬುದು ಹಲವರ ಒತ್ತಾಯ ಎಂದು ಹೇಳಿದರು.