ಪಂಚಭೂತಗಳಲ್ಲಿ ಲೀನರಾದ ಬ್ರಿಗೇಡಿಯರ್ ಎಲ್ ಎಸ್ ಲಿಡ್ಡರ್. ನವದೆಹಲಿ,,ಡಿಸೆಂಬರ್,10,2021(..):ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾದ ಬ್ರಿಗೇಡಿಯರ್ ಎಲ್ ಎಸ್ ಲಿಡ್ಡರ್ ಅವರ ಅಂತ್ಯಕ್ರಿಯೆ ಸಕಲ ಸೇನಾಗೌರವದೊಂದಿಗೆ ಇಂದು ನೆರವೇರಿತು. ನವದೆಹಲಿಯ ಚೌಕಾ ಚಿತಾಗಾರದಲ್ಲಿ ಬ್ರಿಗೇಡಿಯರ್ ಎಲ್ ಎಸ್ ಲಿಡ್ಡರ್ ಅವರ ಅಂತ್ಯಕ್ರಿಯೆ ನೆರವೇರಿತು. ಇದಕ್ಕೂ ಮೊದಲು ಬ್ರಿಗೇಡಿಯರ್ ಲಖ್ವಿಂದರ್ ಸಿಂಗ್ ಲಿಡ್ಡರ್ ಅವರ ಪಾರ್ಥಿವ ಶರೀರಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾಪಡೆ ಮುಖ್ಯಸ್ಥ ಜನರಲ್ ಎಂ ಎಂ ನರವಣೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ ಆರ್ ಚೌಧರಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸಹ ಅಂತಿಮ ನಮನ ಸಲ್ಲಿಸಿದರು. ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ರಕ್ಷಣಾ ಪಡೆ ಮುಖ್ಯಸ್ಥ() ಜನರಲ್ ಬಿಪಿನ್ ರಾವತ್, ಅವರ ರತ್ನಿ ಮಧುಲಿಕಾ ರಾವತ್ ಅವರ ಪಾರ್ಥಿವ ಶರೀರಗಳನ್ನು ದೆಹಲಿಯ ಕಾಮರಾಜ್ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ಕರೆತರಲಾಗಿದ್ದು ಅವರ ಪಾರ್ಥಿವ ಶರೀರಕ್ಕೆ ಕೇಂದ್ರದ ನಾಯಕರು, ಸೇನಾಧಿಕಾರಿಗಳು, ಗಣ್ಯರು ಅಂತಿಮ ನಮನ ಸಲ್ಲಿಸಿದರು. : - – - -- … .. , 10, 2021 (..): .. , . .. . , .. , ., .. , , . . , , .: .. / / /