ಸೇನಾ ಹೆಲಿಕಾಪ್ಟರ್ ಪತನವಾದ ಸ್ಥಳದಲ್ಲಿ 7 ಮೃತದೇಹ ಪತ್ತೆ: ಸಿಡಿಎಸ್ ಬಿಪಿನ್ ರಾವತ್ ಆಸ್ಪತ್ರೆಗೆ ದಾಖಲು. ಊಟಿ,ಡಿಸೆಂಬರ್,8,2021(..):ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಊಟಿಯ ಕೂನೂರು ಬಳಿ ಪತನವಾಗಿದ್ದು ಘಟನಾ ಸ್ಥಳದಲ್ಲಿ 7 ಮೃತದೇಹಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸೇನೆಯ ಹಿರಿಯ ಅಧಿಕಾರಿಗಳು ಸೇರಿ ಒಟ್ಟು 14 ಮಂದಿ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು. ರಕ್ಷಣಾ ಸಿಬ್ಬಂದಿ ಮುಖ್ಯಸ್ಥ () ಬಿಪಿನ್​ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್​ ಕೂಡ ಇದ್ದರು ಎಂದು ಹೇಳಲಾಗುತ್ತಿದೆ. ಸಿಡಿಎಸ್​ ಬಿಪಿನ್​ ರಾವತ್, ಅವರ ಪತ್ನಿ ಮಧುಲಿಕಾ ರಾವತ್​, ಬ್ರಿಗೇಡಿಯರ್​ ಎಲ್​.ಎಸ್​.ಲಿಡ್ಡರ್​, ಲೆಫ್ಟಿನೆಂಟ್ ಕರ್ನಲ್​ ಹರ್ಜಿಂದರ್ ಸಿಂಗ್​, ನಾಯಕ್​ ಗುರುಸೇವಕ್​ ಸಿಂಗ್, ನಾಯಕ್​ ಜಿತೇಂದರ್​ ಕುಮಾರ್​, ಲ್ಯಾನ್ಸ್ ನಾಯಕ್​ ವಿವೇಕ್ ಕುಮಾರ್​, ಲ್ಯಾನ್ಸ್ ನಾಯಕ್​ ಬಿ ಸಾಯ್​ತೇಜ್​, ಹವಲ್ದಾರ್​ ಸತ್ಪಾಲ್​ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಅವರಲ್ಲಿ ಮೂವರನ್ನು ರಕ್ಷಿಸಲಾಗಿದೆ. ಈ ಮೂವರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು ನೀಲಗಿರಿ ಜಿಲ್ಲೆಯ ವೆಲ್ಲಿಂಗ್ಟನ್ ಕಂಟೋನ್ಮೆಂಟ್​ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಪಿನ್ ರಾವತ್ ಅವರಿಗೂ ಗಾಯಗಳಾಗಿದ್ದು ಅವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಭಾರತೀಯ ವಾಯುಸೇನೆ ಟ್ವೀಟ್ ಮಾಡಿದ್ದು,. ಸಿಡಿಎಸ್​ ಬಿಪಿನ್​ ರಾವತ್​ ಇದ್ದ -12V5 ಸೇನಾ ವಿಮಾನ ಇಂದು ತಮಿಳುನಾಡಿನ ಕುನೂರ್​ ಬಳಿ ಅಪಘಾತಕ್ಕೀಡಾಗಿದೆ. ಪತನಕ್ಕೆ ಕಾರಣವೇನು ಎಂಬುದನ್ನು ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ. ಘಟನೆ ಕುರಿತು ಪ್ರಧಾನಿ ಮೋದಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಹಿತಿ ನೀಡಿದ್ದು ಘಟನ ಸ್ಥಳಕ್ಕೆ ರಾಜನಾಥ್ ಸಿಂಗ್ ಅವರು ಭೇಟಿ ನೀಡುವ ಸಾಧ್ಯತೆ ಇದೆ. : 7 - - – –- - - -.