ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು. ಮಂಗಳೂರು,ಡಿಸೆಂಬರ್,8,2021(..):ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಗಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಮಾರ್ಗನ್ಸ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದೆ. ಗಂಡ ಹೆಂಡತಿ ಇಬ್ಬರು ಮಕ್ಕಳು ಆತ್ಮಹತ್ಯೆ ಶರಣಾಗಿದ್ದು ಶವಪತ್ತೆಯಾಗಿದೆ. ಆತ್ಮಹತ್ಯೆಗೆ ಶರಣಾಗಲು ಕಾರಣವೇನು ಎಂಬುದು ಇನ್ನು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : – -