ಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತʼ ಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತನ ನಾಟಕದ ಪರದೆ ಜಾರಿಬಿದ್ದಿದೆ- ಸಿದ್ಧರಾಮಯ್ಯ ವಿರುದ್ಧ ಹೆಚ್.ಡಿಕೆ ವಾಗ್ದಾಳಿ. ಬೆಂಗಳೂರು,ಡಿಸೆಂಬರ್,8,2021(..):ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ʼಸಂದೇಶ ಸನ್ನಿಧಿʼಯಲ್ಲಿ ಕೂತು ಕಾಂಗ್ರೆಸ್‌ ಮತದಾರರ 2ನೇ ಪ್ರಾಶಸ್ತ್ಯದ ಮತಗಳು ಬಿಜೆಪಿಗೇ ಹೋಗಬೇಕು, ಜೆಡಿಎಸ್‌ʼಗಲ್ಲ ಎಂದು ಫರ್ಮಾನು ಹೊರಡಿಸಿದ ʼಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತʼ ಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತನ ನಾಟಕದ ಪರದೆ ಜಾರಿಬಿದ್ದಿದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರಣಿ ಟ್ವಿಟ್ ಮಾಡಿ ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಹೆಚ್.ಡಿ ಕುಮಾರಸ್ವಾಮಿ, ಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತ, ಟರ್ಮಿನೇಟರ್‌, ಸಿದ್ದಕಲೆಯ ನಿಪುಣಾಗ್ರೇಸರು ಈಗ ʼJDFʼ ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳೂನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ʼಜಾತಿ ಸಹಕಾರʼಕ್ಕೆ ಮೊರೆ ಹೋಗಿದ್ದಾರೆ. ಅಯ್ಯೋ, ಎಂಥಾ ದುರ್ವಿಧಿ ಎಂದು ಟೀಕಿಸಿದ್ದಾರೆ. ಅವರಿಗೆ ಜೆಡಿಎಸ್‌ ಫೋಬಿಯಾ ಕಾಡುತ್ತಿದೆ. ಚುನಾವಣೆ ಬಂದರೆ ಜೆಡಿಎಸ್‌ ಚಳಿ-ಜ್ವರ ಹತ್ತುತ್ತದೆ. ಈ ಜ್ವರ ಬಿಡಿಸಿಕೊಳ್ಳಲು ಸಿದ್ದಸೂತ್ರದಾರ ಬಳಸುವ ಹೊಸ ಔಷಧವೇ ʼJDFʼ. ಅವರನ್ನು ಉಳಿಸುವ ಟಾನಿಕ್‌ʼನ ಹೆಸರೇ ಜೆಡಿಎಸ್‌ ಕುಟುಂಬ ರಾಜಕಾರಣ. ಹಾಗಾದರೆ, ಅವರದ್ದು # (#ಸಿದ್ದಸೂತ್ರದಾರಕಾಂಗ್ರೆಸ್‌ಫ್ಯಾಮಿಲಿ ) ಅಲ್ಲವೆ? ಎಂದು ಸಿದ್ಧರಾಮಯ್ಯಗೆ ಟಾಂಗ್ ನೀಡಿದ್ದಾರೆ. ಬಿಜೆಪಿಯನ್ನು ಬೈಯ್ಯುವವರು ಅದೇ ಪಕ್ಷದ ಸಚಿವರ ಪಿಎಗೆ ಟಿಕೆಟ್‌ ಕೊಟ್ಟಿದ್ದರ ಒಳಲೆಕ್ಕ ಏನು? ಹಾಗೆಯೇ ಜೆಡಿಎಸ್‌, ಬಿಜೆಪಿ ಬಿಟೀಂ ಎಂದು ಭಜನೆ ಮಾಡುವವರು, ಸಹಕಾರ ಸಚಿವರ ಸಹಾಯಕನನ್ನು ಅಭ್ಯರ್ಥಿ ಮಾಡಿದ್ದು ಯಾರಿಗೆ ಸಹಕಾರ ನೀಡಲಿಕ್ಕೆ? ಜಾತ್ಯತೀತತೆಯ ಮುಖವಾಡ ಹಾಕಿಕೊಂಡು ಬಿಜೆಪಿಯನ್ನು ಬೈಯ್ಯುವವರು ಅದೇ ಪಕ್ಷದ ಸಚಿವರ ಪಿಎಗೆ ಟಿಕೆಟ್‌ ಕೊಟ್ಟಿದ್ದರ ಒಳಲೆಕ್ಕ ಏನು? ಇದು ಯಾರ ಲೆಕ್ಕ ಚುಕ್ತಾ ಮಾಡಲಿಕ್ಕೆ? ಇದೆಂಥಾ ಒಳ ಒಪ್ಪಂದ? ಎಂದು ಹೆಚ್.ಡಿಕೆ ಪ್ರಶ್ನಿಸಿದ್ದಾರೆ. ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ʼಸಂದೇಶ ಸನ್ನಿಧಿʼಯಲ್ಲಿ ಕೂತು ಕಾಂಗ್ರೆಸ್‌ ಮತದಾರರ 2ನೇ ಪ್ರಾಶಸ್ತ್ಯದ ಮತಗಳು ಬಿಜೆಪಿಗೇ ಹೋಗಬೇಕು, ಜೆಡಿಎಸ್‌ʼಗಲ್ಲ ಎಂದು ಫರ್ಮಾನು ಹೊರಡಿಸಿದ ʼಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತʼ ಸುಳ್ಳು ಸ್ಲೋಗನ್‌ʼಗಳ ಸೃಷ್ಟಿಕರ್ತನ ನಾಟಕದ ಪರದೆ ಜಾರಿಬಿದ್ದಿದೆ. ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ. ʼವಿನಾಶಕಾಲೇ ವಿಪರೀತ ಸುಳ್ಳು!ʼ. ಆ ಸುಳ್ಳುಗಳೇ ಅವರನ್ನು ಸುಡುತ್ತವೆ. ಆಟ ಈಗ ಆರಂಭ ಎಂದು ಸಿದ್ಧರಾಮಯ್ಯ ಪರೋಕ್ಷವಾಗಿ ಟ್ವಿಟ್ ಮೂಲಕ ಹೆಚ್.ಡಿಕೆ ಕುಟುಕಿದ್ದಾರೆ. : - – – – - – - -. … , 8, 2021 (..): . , .. ‘ ’ .“ . . . ‘ ,” ’ .: .. / /