ಒಮಿಕ್ರಾನ್ ಬಗ್ಗೆ ಆತಂಕ ಬೇಡ: ಹೊಸ ವರ್ಷಾಚರಣೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ- ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು, ಡಿಸೆಂಬರ್,8,2021(..):ಒಮಿಕ್ರಾನ್ ಬಗ್ಗೆ ಯಾರಿಗೂ ಆತಂಕ ಬೇಡ. ಹೊಸ ವರ್ಷಾಚರಣೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕೋವಿಡ್ ಒಮಿಕ್ರಾನ್ ಭೀತಿ ಹಿನ್ನೆಲೆ ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಒಮಿಕ್ರಾನ್ ಬಗ್ಗೆ ಯಾವುದೇ ಆತಂಕ ಬೇಡ. ಮಕ್ಕಳು ಪೋಷಕರು ಆತಂಕಪಡಬೇಕಿಲ್ಲ. ಶಾಲೆಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ. ಎಲ್ಲರೂ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು ಎಂದರು. ನಾಳಿನ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ಬಗ್ಗೆ ಚರ್ಚೆ ನಡೆಸುತ್ತೇವೆ. ಕೊರೊನಾ ನಿತಯಂತ್ರಣಕ್ಕೆ ಏನು ಕ್ರಮ ಕೈಗೊಳ್ಳಬೇಕು ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. : ’-- -:-- … : ’ – , 8, 2021 (..): “ . . ,” . , ’ . “ . , ,” .“ . ,” .: / / -19 / / ’