ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಘೋಷಣೆ. ಬೆಂಗಳೂರು,ಡಿಸೆಂಬರ್,7,2021(..):ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲ. ಜೆಡಿಎಸ್ ನಮಗೆ ಅವಶ್ಯಕತೆ ಇಲ್ಲ ಅಂತಾ ಕಾಂಗ್ರೆಸ್ ನವರು ಹೇಳಿದ್ದಾರೆ. ಹಾಗೆಯೇ ಜೆಡಿಎಸ್ ಬೆಂಬಲವನ್ನು ಬಿಜೆಪಿಯವರು ಕೋರಿಲ್ಲ. ಬೆಂಬಲ ವಿಚಾರ ಸ್ಥಳೀಯ ನಾಯಕರಿಗೆ ಬಿಟ್ಟಿದ್ದು.. ಬೆಂಬಲದ ಬಗ್ಗೆ ಸ್ಥಳೀಯ ನಾಯಕರು ನಿರ್ಧರಿಸುತ್ತಾರೆ. ಸ್ಥಳೀಯವಾಗಿ ಅನುಕೂಲವಾಗುವವರೆಗೆ ಬೆಂಬಲ ನೀಡಿ ಎಂದು ಸ್ಥಳೀಯ ನಾಯಕರಿಗೆ ಹೆಚ್.ಡಿ ಕುಮಾರಸ್ವಾಮಿ ಸೂಚಿಸಿದರು. ಜೆಡಿಎಸ್ ಸ್ಪರ್ಧಿಸದ ಕಡೆಗಳಲ್ಲಿ ಬಿಜೆಪಿ ಬೆಂಬಲಿಸುವಂತೆ ಹೆಚ್.ಡಿ ಕುಮಾರಸ್ವಾಮಿ ಬಳಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ಧರು. ಇದೀಗ ಈ ಕುರಿತು ಹೆಚ್.ಡಿಕೆ ಸ್ಪಷ್ಟನೆ ನೀಡಿದ್ದಾರೆ. : – – - – -