ಕೆರೆ ಏರಿಗೆ ಶಾಲಾ ಬಸ್ ಡಿಕ್ಕಿ: 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ. ದಾವಣಗೆರೆ,ಡಿಸೆಂಬರ್,7,2021(..):ಶಾಲೆಯಿಂದ ಮನೆಗೆ ಮಕ್ಕಳನ್ನ ಕರೆದೊಯ್ಯುತ್ತಿದ್ದ ಶಾಲಾ ವಾಹನ ಕೆರೆಯ ಏರಿಗೆ ಡಿಕ್ಕಿಯಾದ ಪರಿಣಾಮ, 20ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೇಹಳ್ಳಿ ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕೆರೆ ಏರಿಗೆ ಶಾಲಾ ವಾಹನ ಡಿಕ್ಕಿ ಆಗಿ ಈ ದುರ್ಘಟನೆ ಸಂಭವಿಸಿದೆ. ಶಾಲಾ ವಾಹನದಲ್ಲಿದ್ದ 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದೆ. ಗಾಯಾಳು ಮಕ್ಕಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. : –- – -20