ಒಮಿಕ್ರಾನ್ ಭೀತಿ ನಡುವೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆ. ನವದೆಹಲಿ,ಡಿಸೆಂಬರ್,7,2021(..):ಒಮಿಕ್ರಾನ್ ಭೀತಿ ನಡುವೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 6,822 ಹೊಸ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಸಚಿವಾಲಯ, ಒಂದೇ ದಿನದಲ್ಲಿ 6,822 ಹೊಸ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಕಳೆದ 558 ದಿನಗಳಲ್ಲೇ ಪತ್ತೆಯಾದ ಅತಿ ಕಡಿಮೆ ಪ್ರಕರಣಗಳಾಗಿವೆ. ಹಾಗೆಯೇ ಒಂದೇ ದಿನದಲ್ಲಿ 220 ಜನ ಕೊರೋನಾಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 4,73,757 ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 10004 ಜನರು ಕೋವಿಡ್ ನಿಂದ ಗುಣಮುಖರಾಗಿದ್ದು ದೇಶದಲ್ಲಿ 95014 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಈವರೆಗೆ 3,40,79,612 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕಳೇದ 24 ಗಂಟೆಯಲ್ಲಿ 79,39,038 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,28,76,10,590 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. : - – – … , 7, 2021 (..): , . 6,822 24 . , 558 . 220 24 , 4,73,757. , 10,004 95,014. 3,40,79,612 24 79,39,038, 1,28,76,10,590.: -19 / /