ಸಿದ್ಧರಾಮಯ್ಯ ವಿಪಕ್ಷ ನಾಯಕನಾಗಿ ಇಂಥ ಆರೋಪಗಳು ಸರಿಯಲ್ಲ – ಸಿಎಂ ಬೊಮ್ಮಾಯಿ ಅಸಮಾಧಾನ. ಹುಬ್ಬಳ್ಳಿ,ಡಿಸೆಂಬರ್,7,2021(..):ಸಿಎಂ ಬಸವರಾಜ ಬೊಮ್ಮಾಯಿ ಸುಳ್ಳು ಹೇಳುತ್ತಾರೆ ಎಂದು ಟೀಕಿಸಿದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸಿದ್ಧರಾಮಯ್ಯ ವಿಪಕ್ಷ ನಾಯಕನಾಗಿ ಇಂಥ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಮೇಲೆ ಬಹಳ ಗೌರವ ಇತ್ತು. ಆದರೆ ಇತ್ತೀಚೆಗೆ ಅವರ ಹೇಳಿಕೆಗಳಿಂದ ನಿರಾಸೆಯಾಗಿದೆ. ಸಿದ್ದರಾಮಯ್ಯ ಓರ್ವ ಮಾಜಿ ಸಿಎಂ, ವಿಪಕ್ಷ ನಾಯಕನಾಗಿ ಇಂಥ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು. ಕೊರೋನಾ ಮೂರನೇ ಅಲೆ ಒಮಿಕ್ರಾನ್ ತಡೆಗಟ್ಟಲು ಎಲ್ಲಾ ರೀತಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದಷ್ಟು ಬೇಗ ಟೆಸ್ಟ್ ವರದಿ ಬರುವಂತೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ. ಇನ್ನು ಒಮಿಕ್ರಾನ್ ವೇಗವಾಗಿ ಹರಡುತ್ತೆ ಆದರೆ ತೀವ್ರತೆ ಕಡಿಮೆ ಎಂಬ ಮಾಹಿತಿ ಇದೆ. ಜನರು ಎಚ್ಚರದಿಂದ ಇರುವುದು ಅಗತ್ಯ ಎಂದು ಬೊಮ್ಮಾಯಿ ತಿಳಿಸಿದರು. : - - – - – … : , 7, 2021 (..): ’ , . “ . . . ,” . , . , . , .: / / /