ಕೆ.ಎಸ್.ಆರ್.ಟಿ.ಸಿ ಬಸ್ ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು. ಮೈಸೂರು,ಡಿಸೆಂಬರ್,7,2021(..):ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಿಲೇನಿಯಮ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ. ಬನ್ನಿಮಂಟಪ ಬಸ್ ಡಿಪೋದಿಂದ ಗ್ರಾಮಾಂತರ ಬಸ್ ನಿಲ್ದಾಣದತ್ತ ಹೊರಟ ರಾಜಹಂಸ ಬಸ್ ಗೆ ಬೈಕ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಎನ್.ಆರ್.ಸಂಚಾರಿ ಪೊಲೀಸರು ಹಾಗೂ ಎನ್.ಆರ್.ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತನ ವಿವರ ತಿಳಿದು ಬಂದಿಲ್ಲ. : - –--- - .