ಒಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧ- ಸಿಎಂ ಬಸವರಾಜ ಬೊಮ್ಮಾಯಿ. ಬೀದರ್, ಡಿಸೆಂಬರ್,6,2021(..):ಕೋವಿಡ್ 19 ರೂಪಾಂತರ ತಳಿ ಒಮಿಕ್ರಾನ್ ನಿಯಂತ್ರಣಕ್ಕೆ ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭಾಲ್ಕಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಒಮಿಕ್ರಾನ್ ಹರಡುವಿಕೆಯನ್ನು ತಡೆಗಟ್ಟಲು ತಜ್ಞರ ಮಾರ್ಗಸೂಚಿಯಂತೆ ಕ್ರಮ ವಹಿಸಿಸಲಾಗಿದೆ. ಕ್ಲಸ್ಟರ್ ಗಳ ನಿರ್ವಹಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರಿನಲ್ಲಿ ನಿನ್ನೆ ಕ್ಲಸ್ಟರ್ ಆಗಿದ್ದು, ಸಂಪರ್ಕಿತರ ಪತ್ತೆ ಹಾಗೂ ಚಿಕಿತ್ಸೆಗೆ ಕ್ರಮ ವಹಿಸಲಾಗಿದೆ. ಕಾಲಕಾಲಕ್ಕೆ ತಜ್ಞರಿಂದ ಮಾಹಿತಿ ಪಡೆದು ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು. ವಿಧಾನ ಪರಿಷತ್ ಚುನಾವಣೆಯಲ್ಲಿ ಭಾ.ಜ.ಪ ಸ್ಪರ್ಧಿಸಿರುವಲೆಲ್ಲಾ ಗೆಲುವು ಸಾಧಿಸುವ ವಿಶ್ವಾಸವನ್ನು ಸಿಎಂ ಬೊಮ್ಮಾಯಿ ವ್ಯಕ್ತಪಡಿಸಿದರು. : - – –--