ಜೆಡಿಎಸ್ ಜತೆ ಹೊಂದಾಣಿಕೆ ಇಲ್ಲ- ಮಾಜಿ ಸಿಎಂ ಬಿಎಸ್ ವೈ ಸ್ಪಷ್ಟನೆ. ಮಂಡ್ಯ,ಡಿಸೆಂಬರ್,5,2021(..):ಡಿಸೆಂಬರ್ 10 ರಂದು ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿರುವ ಬಿಎಸ್ ಯಡಿಯೂರಪ್ಪ, ಯಾವುದೇ ಪಕ್ಷದ ಜತೆ ಹೊಂದಾಣಿಕೆ ಇಲ್ಲ. ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಅಭ್ಯರ್ಥಿಗಳಿಲ್ಲದ ಕಡೆ ಬೆಂಬಲ ಕೇಳಿದ್ದೇವೆ ಅಷ್ಟೆ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಇತ್ತ ಮೈಸೂರಿನಲ್ಲಿ ಮಾತನಾಡಿರುವ ಹೆಚ್,ಡಿ ಕುಮಾರಸ್ವಾಮಿ, ಬಿಜೆಪಿಗೆ ಬೆಂಬಲ ನೀಡುವ ಕುರಿತು ನಾಳೆ ನಿರ್ಧಾರ ಮಾಡುತ್ತೇವೆ ಎಂದಿದ್ದು ಏನಾಗುತ್ತೆ ಎಂಬುದನ್ನ ಕಾದು ನೋಡಬೇಕಿದೆ. : -- - -