ಒಮಿಕ್ರಾನ್ ವೇಗವಾಗಿ ಹರಡುತ್ತೆ : ಪರಿಣಾಮ ಮಾತ್ರ ಕಡಿಮೆ ಇದೆ- ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ಡಿಸೆಂಬರ್,4,2021(..):ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತೆ ಎನ್ನುತ್ತಿದ್ದಾರೆ. ಆದರೆ ಒಮಿಕ್ರಾನ್ ಪರಿಣಾಮ ಮಾತ್ರ ಕಡಿಮೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,ರಾಜ್ಯದಲ್ಲಿ ಈಗಾಗಲೇ ಒಮಿಕ್ರಾನ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹತ್ವದ ಕ್ರಮಗಳನ್ನು ಕೈಗೊಂಡಿದ್ದು, ಶಾಲಾ-ಕಾಲೇಜು ಮಕ್ಕಳ ಪೋಷಕರು, ಸಿಬ್ಬಂದಿಗೂ 2 ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ ಎಂದರು. ಒಮಿಕ್ರಾನ್ ಸೋಂಕಿನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಒಮಿಕ್ರಾನ್ ಸೋಂಕಿಗೆ ಹೇಗೆ ಚಿಕಿತ್ಸೆ ನೀಡಬೇಕು ಎಂಬುದರ ಕುರಿತು ಮಾಹಿತಿ ಪಡೆಯಲಾಗುತ್ತಿದೆ. ಇನ್ನು ಮೊದಲ ಕೊರನಾ ಪ್ರಕರಣಗಳಿಗೆ ಕ್ಲಸ್ಟರ್ ಎಂದು ಕರೆಯಲಾಗುತ್ತಿತ್ತು. ಈಗ 3 ಪ್ರಕರಣಗಳಿಗೆ ಕ್ಲಸ್ಟರ್ ಮಾಡಲಾಗುತ್ತಿದೆ. ಅಪಾರ್ಟ್ ಮೆಂಟ್ ಭೇಟಿಗೂ ಇನ್ಮುಂದೆ 2 ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. : –- - –-- . … , : , 4,2021 (..): “ , ,” . , . , - .“ , . . ,” .: / / /