ಒಮಿಕ್ರಾನ್ ಹರಡದಂತೆ ಮುನ್ನೆಚ್ಚರಿಕೆ ವಹಿಸಿ: ನಿಮ್ಮ ನಿರ್ಧಾರಕ್ಕೆ ನಮ್ಮ ಸಹಕಾರವಿರುತ್ತೆ- ಮಾಜಿ ಸಿಎಂ ಸಿದ್ಧರಾಮಯ್ಯ. ಚಿಕ್ಕಮಗಳೂರು,ಡಿಸೆಂಬರ್,3,2021(..):ರಾಜ್ಯದಲ್ಲಿ ಒಮಿಕ್ರಾನ್ ಎರಡು ಪ್ರಕರಣಗಳು ಪತ್ತೆಯಾದ ಬೆನ್ನಲ್ಲೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು ಕಠಿಣ ನಿಯಮ ಜಾರಿಗೊಳಿಸುತ್ತಿದೆ. ಈ ಕುರಿತು ಮಾತನಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ಸರ್ಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಸಿದ್ಧರಾಮಯ್ಯ, ಒಮಿಕ್ರಾನ್ ಹರಡದಂತೆ ಮುನ್ನೆಚ್ಚರಿಕೆ ವಹಿಸಿ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಸರ್ಕಾರಕ್ಕೆ ಎಲ್ಲಾ ರೀತಿಯ ಸಹಕಾರ ನೀಡುತ್ತೇವೆ. ರಾಜಕೀಯ ಸಮಾವೇಶಕ್ಕೆ ನಿರ್ಬಂಧಾವನ್ನಾದ್ರೂ ಹೇರಿ. ನಿಮ್ಮ ನಿರ್ಧಾರಕ್ಕೆ ನಮ್ಮ ಸಹಕಾರ ಇರುತ್ತೆ ಎಂದರು. ಹಾಗೆಯೇ ಕೇಂದ್ರ ಸರ್ಕಾರದ ಅನುಮತಿ ಪಡೆದು ಬೂಸ್ಟರ್ ಲಸಿಕೆ ನೀಡಬೇಕು. ಎಲ್ಲರಿಗೂ 2 ಡೋಸ್ ಲಸಿಕೆ ನೀಡಬೇಕು. ಎಂದು ಸಿದ್ಧರಾಮಯ್ಯ ಆಗ್ರಹಿಸಿದರು. : – - – - -.