58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಿಸಿದ ರಾಜ್ಯ ಚುನಾವಣಾ ಆಯೋಗ. ಬೆಂಗಳೂರು,ನವೆಂಬರ್,29,2021(..):ಅವಧಿ ಮುಕ್ತಾಯ ಹಿನ್ನೆಲೆ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. 7 ಜಿಲ್ಲೆಗಳ 4 ನಗರಸಭೆ, 19 ಪುರಸಭೆ, 35 ಪಟ್ಟಣ ಪಂಚಾಯಿತಿಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ತೆರವಾಗಿರುವ ಸ್ಥಾನಗಳಿಗೂ ಚುನಾವಣೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 27 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30 ರಂದು ಫಲಿತಾಂಶ ಪ್ರಕಟವಾಗಲಿದೆ. ಡಿಸೆಂಬರ್ 8 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಡಿ.8ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಡಿ. 15ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಲಿದೆ. ಚುನಾವಣೆ ಹಿನ್ನೆಲೆ ಡಿಸೆಂಬರ್ 8 ರಿಂದ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. : - - – 58 .