ಕೊರೊನಾ ಮೀಟರ್: ದೇಶದಲ್ಲಿ 8,774 ಹೊಸ ಪ್ರಕರಣ ನವದೆಹಲಿ, ನವೆಂಬರ್ 2021 (..):: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,774 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದ್ದು, ಕೋವಿಡ್ ಗೆ ಹೊಸದಾಗಿ 621 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದೆ. ನಿನ್ನೆ ಒಂದೇ ದಿನ 9,481 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಈ ವರೆಗೆ ಒಟ್ಟು 3,39,98,278 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ. ಇಲ್ಲಿವರೆಗೆ ದೇಶದಾದ್ಯಂತ 3,45,72,523 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, 4,68,554 ಮಂದಿ ಮೃತಪಟ್ಟಿದ್ದಾರೆ. ಒಟ್ಟು 1,05,691 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.