‘ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್’ ಚಿತ್ರದ ಧ್ವನಿ ಸುರುಳಿ ಬಿಡುಗಡೆ. ಮೈಸೂರು,ನವೆಂಬರ್,27,2021(..):ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್’ ಚಿತ್ರದ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಲಾಯಿತು. ಚಿತ್ರದ ಹಾಡುಗಳನ್ನು ರಂಗಿತರಂಗ ಖ್ಯಾತಿಯ ನಿರೂಪ್ ಬಂಡಾರಿ ಬಿಡುಗಡೆ ಗೊಳಿಸಿದರು. ಮೈಸೂರು ಮೂಲದವರಾದ ಅಮೆರಿಕನ್‌ ಪ್ರಜೆ ಯಶಸ್ವಿ ಶಂಕರ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚಿತ್ರ ಬಿಡುಗಡೆಯ ದಿನಾಂಕವನ್ನು ಆದಷ್ಟು ಬೇಗ ನಿಗದಿಪಡಿಸುತ್ತೇವೆ, ಇದೊಂದು ಸಸ್ಪೆನ್ಸ್‌ ಮತ್ತು ಥ್ರಿಲ್ಲರ್‌ ಚಿತ್ರವಾಗಿದೆ ಎನ್ನುತ್ತಾರೆ ನಿರ್ದೇಶಕ ಎಂ.ಎನ್‌.ಶ್ರೀಕಾಂತ್‌, ರಾಘವ್‍ ನಾಯಕನಾಗಿ ಸಂಜನಾ ಬುರ್ಲಿ ನಾಯಕಿಯಾಗಿ ನಟಿಸಿದ್ದಾರೆ. ತೆಲುಗಿನ ಗೋಪಿನಾಥ್‍ ಭಟ್, ನವನೀತ್‍ಚರಿ ಸಂಗೀತ ಸಂಯೋಜಿಸಿದ್ದು, ಸಂಕಲನ ವಿಜೇತ್ ಚಂದ್ರ, ನೃತ್ಯ ಕಲೈ-ಹರಿಕೃಷ್ಣ ನಿರ್ವಹಿಸಿದ್ದಾರೆ. : -- --