ಪರಿಷತ್ ಚುನಾವಣೆ: ಜೆಡಿಎಸ್ ಬೆಂಬಲಕ್ಕೆ ಮನವಿ ಮಾಡುತ್ತೇವೆ- ಮಾಜಿ ಸಿಎಂ ಬಿಎಸ್ ವೈ. ಶಿವಮೊಗ್ಗ,ನವೆಂಬರ್,25,2021(..):ಡಿಸೆಂಬರ್ 10 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸುವಂತೆ ಜೆಡಿಎಸ್ ಬಳಿ ಮನವಿ ಮಾಡುವುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿಧಾನಪರಿಷತ್ ನ 25 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಬಿಜೆಪಿ 20 ಸ್ಥಾನಗಳಿಗೆ ಸ್ಪರ್ಧಿಸಿದ್ದು ಜೆಡಿಎಸ್ 7 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಹೀಗಾಗಿ ಜೆಡಿಎಸ್ ಸ್ಪರ್ಧಿಸದ ಕಡೆ ಬೆಂಬಲಿಸುವಂತೆ ಮನವಿ ಮಾಡುತ್ತೇವೆ ಎಂದರು. ಬಿಜೆಪಿ 15 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಡಿಎಸ್ ಅರುಣ್ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದರು. : - - – - – -