ಬೆಂಗಳೂರಿನ ಮಳೆಹಾನಿ ಪ್ರದೇಶಗಳಲ್ಲಿ ಸಿಎಂ ರೌಂಡ್ಸ್: ರಾಜಕಾಲುವೆ ಪರಿಶೀಲಿಸಿದ ಸಿಎಂ ಬೊಮ್ಮಾಯಿ. ಬೆಂಗಳೂರು,ನವೆಂಬರ್,24,2021(..):ರಾಜ್ಯದಲ್ಲಿ ಸುರಿದ ಧಾರಾಕಾರ ಮಳೆ ಕೊಂಚ ಬಿಡುವು ನೀಡಿದ್ದು ವರುಣನ ಅಬ್ಬರಕ್ಕೆ ಜನರು ತತ್ತರಿಸಿದ್ದಾರೆ. ಈ ಮಧ್ಯೆ ಬೆಂಗಳೂರಿನ ಪ್ರದೇಶಗಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರವನ್ನೇ ಸೃಷ್ಠಿಸಿದೆ. ಈ ಹಿನ್ನೆಲೆಯಲ್ಲಿ ನಿನ್ನೆಯಿಂದ ನಗರದ ಮಳೆಹಾನಿ ಪ್ರದೇಶಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಂತೆಯೇ ಇಂದು ಸಹ ಸಿಎಂ ಬೊಮ್ಮಾಯಿ ಮಳೆಹಾನಿ ಪ್ರದೇಶಗಳಲ್ಲಿ ರೌಂಡ್ಸ್ ಮುಂದುವರೆಸಿದ್ದಾರೆ. ಇಂದು ರಾಜಕಾಲುವೆ ಪರಿಶೀಲನೆ ನಡೆಸಿದ್ದಾರೆ. ಹೆಣ್ಣೂರು ಬಂಡೆಯ ವಡ್ಡರಪಾಳ್ಯದಲ್ಲಿ ಸಿಎಂ ಬೊಮ್ಮಾಯಿ ಭೇಟಿ ನೀಡಿ ಪರಿಶೀಲಿಸಿದರು. ಸಿಎಂಗೆ ಸಚಿವ ಭೈರತಿ ಬಸವರಾಜ್ ಸಾಥ್ ನೀಡಿದರು. ರಾಜಕಾಲುವೆ ಒತ್ತುವರಿ, ಅತಿಕ್ರಮಣದಿಂದಾಗಿ ಅಪಾರ್ಟ್ ಮೆಂಟ್ ಗಳಿಗೆ ನೀರು ನುಗ್ಗಿದೆ ಎಂದು ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಶೀಗ್ರ ಕ್ರಮ ಕೈಗೊಳ್ಳುವುದಾಗಿ ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ. : – – -- …. - : , 24, 2021 (..): , , , . , - . , . - . . . , , . .: / / - /