ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ: ಸಂತ್ರಸ್ತರ ಸಮಸ್ಯೆ ಆಲಿಸಿದ ಸಿಎಂ ಬೊಮ್ಮಾಯಿ. ಬೆಂಗಳೂರು,ನವೆಂಬರ್,23,2021(..):ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆ ಆಲಿಸಿದರು. ಯಲಹಂಕ ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಭಾರಿ ಮಳೆಯಿಂದಾಗಿ ಕಳೆದ ಐದಾರು ದಿನಗಳಿಂದ ಜಲಾವೃತವಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನಲೆಯಲ್ಲಿ ಇಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ ಸಂತ್ರಸ್ತರ ಸಮಸ್ಯೆ ಆಲಿಸಿದರು. ರಾಜಕಾಲುವೆ ಒತ್ತುವರಿಯಿಂದ ನೀರು ಮನೆಗಳಿಗೆ ನುಗ್ಗಿದೆ. ರಾಜಕಾಲುವೆ ಒತ್ತುವರಿ ಶೀಘ್ರ ತೆರವು ಮಾಡಿಸುವುದಾಗಿ ಸಿಎಂ ಬೊಮ್ಮಾಯಿ ಭರವಸೆ ನೀಡಿದರು. ಈ ಕುರಿತು ಮಾತನಾಡಿದ ಅವರು, ಈ ಭಾಗದಲ್ಲಿ ಕಳೆದ 3 ದಿನಗಳಿಂದ ಭಾರಿ ಮಳೆಯಾಗಿದೆ. ರಾಜಕಾಲುವೆ ಅತಿಕ್ರಮಣದಿಂದ ನೀರು ಮನೆಗಳಿಗೆ ನುಗ್ಗಿ ತೊಂದರೆಯಾಗಿದೆ. ಎಲ್ಲಾ 11 ಕೆರೆಗಳ ನೀರು ಯಲಹಂಕ ಕೆರೆಗೆ ಸೇರುತ್ತದೆ. ರಾಜಕಾಲುವೆ ಅತಿಕ್ರಮಣ ನನ್ನ ಗಮನಕ್ಕೆ ಬಂದಿದೆ. ಮಳೆ ನಿಂತ ಬಳಿಕ ರಾಜಕಾಲುವೆ ಅಗಲೀಕರಣಕ್ಕೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. : – - – - – – – .