ಕೋವಿಡ್ ಸಂಕಷ್ಟದ ನಂತರ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ – ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು, ನವೆಂಬರ್ ,23,2021(..):ಕೋವಿಡ್ ಸಂಕಷ್ಟದ ನಂತರ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಾಧ್ಯಮದವರ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೋವಿಡ್ ನಂತರ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಗೂ ಆರ್ಥಿಕ ಸಂಪನ್ಮೂಲಗಳ ಕ್ರೋಢೀಕರಣದ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕೋವಿಡ್ 2 ವರ್ಷದಲ್ಲಿ ದೇಶ ರಾಜ್ಯದಲ್ಲಿ ಆರ್ಥಿಕ ಹಿಂಜರಿತವಾಗಿತ್ತು. ಈಗ ಕೋವಿಡ್ 2 ನೇ ಅಲೆಯನ್ನು ವ್ಯಾಪಕವಾಗಿ ಲಸಿಕೆ ನೀಡುವ ಮುಖಾಂತರ ಯಶಸ್ವಿಯಾಗಿ ನಿರ್ವಹಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ರಂಗಗಳಲ್ಲೂ ಆರ್ಥಿಕ ಚಟುವಟಿಕೆ ಪ್ರಾರಂಭವಾಗಿ ಉತ್ತಮಗೊಂಡಿದೆ ಎಂದು ತಿಳಿಸಿದರು. ಜಿಎಸ್ ಟಿ ಸಂಗ್ರಹ ಈಗ 1,30,000 ಕೋಟಿ ರೂ. ಕಳೆದ ತಿಂಗಳಲ್ಲಿ ಆಗಿದೆ. ಈ ಬಾರಿಯೂ ಕೂಡ 1,20,000 ಕೋಟಿ ರೂ. ಸಂಗ್ರಹದ ನಿರೀಕ್ಷೆ ಇದೆ. ಆರ್ಥಿಕತೆ ಅಭಿವೃದ್ಧಿಯ ಆಗುತ್ತಿರುವ ಬಗ್ಗೆ ಸ್ಪಷ್ಟ ದಿಕ್ಸೂಚಿ. ರಾಜ್ಯದಲ್ಲೂ ಕೂಡ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತಿದ್ದು, ಹಲವಾರು ಕ್ರಮಗಳನ್ನು , ಕೆಲವರಿಗೆ ಗುರಿಗಳನ್ನು ನೀಡಿ, ಅನುಸರಣೆ ಕಡಿಮೆ ಇರುವಲ್ಲಿ, ಅನುಸರಣೆ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಜಿಎಸ್ ಟಿ ಸಂಗ್ರಹದಲ್ಲಿ ರಾಜ್ಯದ ಪಾಲು ಮೂರು ತಿಂಗಳಿಗೊಮ್ಮೆ ಸರಿಯಾಗಿ ಬರುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ವಸತಿ ಯೋಜನೆಗಳ ಪ್ರಗತಿ: ಸಚಿವ ಸಂಪುಟದಲ್ಲಿ 5 ಲಕ್ಷಗಳ ಮನೆಗಳಿಗೆ ಮಂಜೂರಾತಿ ನೀಡಲಾಗಿದೆ. ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿ, 4 ಲಕ್ಷ ಗ್ರಾಮೀಣ ಹಾಗೂ 1 ಲಕ್ಷ ನಗರ ಪ್ರದೇಶದಲ್ಲಿ ವಸತಿ ನಿರ್ಮಾಣಕ್ಕೆ ಆದೇಶ ನೀಡಲಾಗಿದೆ. ಅಮೃತ ಯೋಜನೆಯಲ್ಲಿ 750 ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಸತಿರಹಿತರಿಗೆ ಮನೆಗಳನ್ನು ನೀಡುವ ಯೋಜನೆ ರೂಪಿಸಲಾಗಿದೆ. ಒಂದೂವರೆ ವರ್ಷದಲ್ಲಿ 4 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. : – –- –- . … : . 23. , . , “ 2 . .” Rs1,30,000 Rs1,20,000 . . , . , , 5 . . 4 1 .