ರೈತರ ಖಾತೆಗೆ ನೇರವಾಗಿ ನೆರೆ ಪರಿಹಾರದ ಹಣ: ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು, ಅಕ್ಟೋಬರ್ 21, 2021 (..):ಮಳೆಯಿಂದಾಗಿ ಬೆಳೆ ನಾಶ, ರಸ್ತೆ, ಸೇತುವೆ, ಮೂಲ ಸೌಕರ್ಯಗಳಿಗೆ ಹಾನಿಯಾಗಿದೆ. ಜುಲೈನಲ್ಲಿ ಮೂರು ಲಕ್ಷ ರೈತರಿಗೆ ಹಣ ಬಿಡುಗಡೆ ಮಾಡಲಾಗಿದೆ. ಡಿಬಿಟಿ ಮೂಲಕ ಹಣ ಜಮಾ ಮಾಡಲು ತಿಳಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈಗಾಗಲೇ ಮಳೆ ಹಾನಿ ಸಮೀಕ್ಷೆ ವರದಿ ನೀಡಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಹಾನಿ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ನೀಡಲು ಸೂಚಿಸಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ. ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿ ಬಗ್ಗೆ ಆದಷ್ಟು ಬೇಗ ಪರಿಹಾರ ನೀಡುವ ಕಾರ್ಯ ಪ್ರಗತಿಯಲ್ಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಈಗಾಗಲೇ ಎಲ್ಲ ಕಡೆ ಪ್ರಾಥಮಿಕ ಸಮೀಕ್ಷೆ ಆರಂಭಿಸಲಾಗಿದೆ ಎಂದೂ ಹೇಳಿದ್ದಾರೆ. ಜಿಲ್ಲೆಗಳಿಗೆ ಹೋಗಲು ಚುನಾವಣೆ ಆಯೋಗದ ಅನುಮತಿ ಕೇಳಲಾಗಿದೆ. ಆಯೋಗ ಒಪ್ಪಿದರೆ ಸಚಿವರು ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.