ಕೆಲಸ ಸಿಗದ ಹಿನ್ನೆಲೆ: ಡೆತ್ ನೋಟ್ ಬರೆದಿಟ್ಟು ಯುವಕ ಅತ್ಮಹತ್ಯೆ ಮೈಸೂರು,ಜೂನ್,26,2024 (..):ಕೆಲಸ ಸಿಗದ ಹಿನ್ನೆಲೆ ಡೆತ್ ನೋಟ್ ಬರೆದಿಟ್ಟು ಯುವಕ ಅತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರದಲ್ಲಿ ನಡೆದಿದೆ. ಕಿರಣ್ (28) ಅತ್ಮಹತ್ಯೆ ಮಾಡಿಕೊಂಡ ಯುವಕ. ನಿನ್ನೆ ಸಂಜೆ ಟಿ.ನರಸೀಪುರದ ತನ್ನ ರೂಮ್ ನಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾನೆ. ಕಿರಣ್ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೇರಂಬಾಡಿ ಗ್ರಾಮದ ನಿವಾಸಿಯಾಗಿದ್ದು ಟಿ.ನರಸೀಪುರದ ಶಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದನು ಎನ್ನಲಾಗಿದೆ. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಕಂಪನಿಯ ಕ್ವಾಲಿಟಿ ಎ.ಜಿ.ಎಂ ಲೋಕೇಶ್ ಹಾಗೂ ಹೆಚ್.ಆರ್. ಎ.ಜಿ.ಎಂ ಅನಿಲ್ ಕಾರಣ ಎಂದು ನಮೂದು ಮಾಡಿದ್ದಾನೆ. ಕೆಲಸದಿಂದ ಬೇಕೆಂತಲೇ ತೆಗೆದಿದ್ದಾರೆ. ನನ್ನ ಬಗ್ಗೆ ಬೇರೆ ಕಡೆ ಕೆಟ್ಟ ಫೀಡ್ ಬ್ಯಾಕ್ ಕೊಟ್ಟು ಎಲ್ಲೂ ಕೆಲಸಕ್ಕೆ ತೆಗೆದುಕೊಳ್ಳದ ಹಾಗೆ ಮಾಡಿದ್ದಾರೆ. ಇವರಿಂದ ಕೆಲಸ ಸಿಗದೆ ನಾನು ಅತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಮೃತ ಕಿರಣ್ ಉಲ್ಲೇಖ ಮಾಡಿದ್ದಾನೆ. ಈ ಕುರಿತು ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - – -