ಮಳೆಯಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ- ಸಚಿವ ಡಾ.ಕೆ.ಸುಧಾಕರ್. ಚಿಕ್ಕಬಳ್ಳಾಪುರ,ನವೆಂಬರ್,20,2021(..):ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು ಮನೆಗಳು ಕುಸಿದು ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ನಡುವೆ ಮಳೆಯಿಂದ ಮನೆ ಕಳೆದುಕೊಂಡವರಿಗೆ ರೂ. 5 ಲಕ್ಷ ಪರಿಹಾರ ನೀಡುತ್ತೇವೆ, ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸುತ್ತೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಹಾ ಮಳೆ ಹಿನ್ನೆಲೆ ಬೆಳ್ಳಂಬೆಳಿಗ್ಗೆ ಸಚಿವ ಡಾ .ಕೆ. ಸುಧಾಕರ್ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಲಾವೃತವಾಗಿರುವ ಸೇತುವೆಗಳ ವೀಕ್ಷಣೆ ಮಾಡಿದರು. ನಗರದ ಕಂದವಾರ ಕೆರೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆ ಅಲ್ಲಿಗೆ ತೆರಳಿ ವೀಕ್ಷಣೆ ಮಾಡಿದರು. ಬಳಿಕ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, 50 ವರ್ಷಗಳ ಇತಿಹಾಸದಲ್ಲಿ ಇಂತಹ ಮಳೆ ನೋಡಿಲ್ಲ. ಚಿಕ್ಕಂದಿನಿಂದಲೂ ಇಂಥ ಮಳೆ ನೀರು ಹರಿಯುವುದನ್ನು ನೋಡಿಯೆ ಇಲ್ಲ. ಒಂದೆಡೆ ಸಂತಸವಾದ್ರೆ ಮತ್ತೊಂದೆಡೆ ಅನಾನುಕೂಲವಾಗಿ, ಜನ ಪರಿತಪಿಸುವತಾಗಿದೆ ಎಂದರು. ಮಳೆಯಿಂದಾಗಿ ಕೆರೆಕಟ್ಟೆಗಳು ತುಂಬಿವೆ. ಎಚ್ಚರಿಕೆಯ ಮಧ್ಯೆಯೂ ಕೆಲವರು ನೀರಿಗಿಳಿಯುತ್ತಿದ್ದಾರೆ. ಸ್ಥಳೀಯ ಜನಪ್ರತಿನಿಧಿಗಳು ಜನರನ್ನು ಎಚ್ಚರಿಸಬೇಕು. ಮಳೆ ಆಪತ್ತನ್ನು ಎಲ್ಲರೂ ಒಗ್ಗಟ್ಟಗಾಗಿ ಎದುರಿಸೋಣ. ಮನೆ ಕಳೆದುಕೊಂಡವರು ಆತಂಕ ಪಡಬೇಕಾಗಿಲ್ಲ. ಜಿಲ್ಲಾಡಳಿತ ನಿಮ್ಮ ಜೊತೆ ಇರುತ್ತೆ ಎಂದು ಸಚಿವ ಡಾ. ಕೆ. ಸುಧಾಕರ್ ಭರವಸೆ ನೀಡಿದರು. : --- 5 – – - . . … . 5 : . . , 2, 2021 (..): “ . , . , . 5 ,” . . , . . , , , . , . . , “ ’ 50 . . .”, .: . . / / / . 5 /