ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಸಂಘ ತೆರೆಯುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ. ಬೆಂಗಳೂರು, ನವೆಂಬರ್ 18,2021(..):ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಸಂಘ ತೆರೆಯುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು. ಉಬುಂಟು ಒಕ್ಕೂಟ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ವತಿಯಿಂದ ಲಲಿತ್ ಅಶೋಕ ಹೊಟೇಲ್ ನಲ್ಲಿ ಆಯೋಜಿಸಿದ್ದ ಒಟ್ಟಾಗಿ ಬೆಳೆಯೋಣ ( ) ಮತ್ತು ಅಂತರಾಷ್ಟ್ರೀಯ ಮಹಿಳಾ ಉದ್ದಿಮೆಗಳ ದಿನಾಚರಣೆಯ ಉದ್ಘಾಟನಾ ಕಾರ್ಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದರು. ಈ ನಡುವೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಹಳ್ಳಿಗಳಲ್ಲಿ ಸ್ವಸಹಾಯ ಸಂಘ ಮಾದರಿಯಲ್ಲಿ ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಸಂಘ ತೆರೆಯಲಾಗುತ್ತದೆ. ಆರ್ಥಿಕವಾಗಿ ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ನೆರವು ನೀಡಲು ಸಂಘ ತೆರೆಯಲಾಗುತ್ತದೆ. ದೃಷ್ಟಿಚೇತನ, ವಿಕಲಚೇತನ ಮಹಿಳೆಯರಿಗೆ ವಿಶೇಷ ಯೋಜನೆ ಜಾರಿ ಮಾಡುತ್ತೇವೆ ಎಂದು ತಿಳಿಸಿದರು. : - - – – - – . … , 18, 2021 (..): . ‘ ’ , . , - . . “ ,” .: / / /