ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಓರ್ವ ಮಹಿಳೆ ಸಾವು: ಬೈಕ್ ಸವಾರನಿಗೆ ಗಂಭೀರ ಗಾಯ. ಮೈಸೂರು,ನವೆಂಬರ್,15,2021(..):ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಟೀ. ನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ. ಟಿ.ನರಸೀಪುರ ತಾಲ್ಲೂಕಿನ ಆಲಗೂಡು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಮಾಡ್ರಹಳ್ಳಿ ಗ್ರಾಮದ 35 ವರ್ಷದ ಮಂಜುಳಾ ಮೃತಪಟ್ಟವರು. ಬೈಕ್ ಸವಾರ 40 ವರ್ಷದ ಚಿಕ್ಕಸ್ವಾಮಿ ಗೆ ಗಂಭೀರ ಗಾಯಗಳಾಗಿದೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : –- – - -