ಜುಲೈ 8ರವರೆಗೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ಬೆಂಗಳೂರು,ಜೂನ್,24,2024 (..):ಲೈಂಗಿಕ ದೌರ್ಜನ್ಯ, ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜುಲೈ 8 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಇಂದು ಎಸ್‌ಐಟಿ ಕಸ್ಟಡಿ ಅಂತ್ಯಗೊಂಡ ಕಾರಣ, ಇಂದು ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠವು, ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. : - - - 8