ಇನ್ನು ಮೂರು ದಿನಗಳಲ್ಲಿ ಜೆಡಿಎಸ್ ಗೆ ಅಧಿಕೃತ ರಾಜೀನಾಮೆ- ಸಂದೇಶ್ ನಾಗರಾಜ್ ಘೋಷಣೆ. ಮೈಸೂರು,ನವೆಂಬರ್,12,2021(..):ಮೈಸೂರು ಭಾಗದಲ್ಲಿ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದ್ದು ಇನ್ನ ಮೂರು ದಿನಗಳಲ್ಲಿ ಜೆಡಿಎಸ್ ಗೆ ಅಧಿಕೃತವಾಗಿ ರಾಜೀನಾಮೆ ಕೊಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಘೋಷಿಸಿದ್ದಾರೆ. ಈ ಕುರಿತು ಮಾತನಾಡಿದ ಸಂದೇಶ್ ನಾಗರಾಜ್, ಜೆಡಿಎಸ್ ಗೆ ಗುಡ್ ಬೈ ಹೇಳಿ ಮೈಸೂರಿನ ಬಿಜೆಪಿ ಕಚೇರಿಯಲ್ಲೆ ಬಿಜೆಪಿ ಸೇರ್ಪಡೆಯಾಗುತ್ತೇನೆ. ಬಿಜೆಪಿ ಸೇರುವ ದಿನ ನಾನು ಯಾಕೆ ಜೆಡಿಎಸ್ ಬಿಟ್ಟೆ ಎಂಬುದನ್ನು ಸುದ್ದಿಗೋಷ್ಠಿ ನಡೆಸಿ ವಿವರಿಸುತ್ತೇನೆ ಎಂದರು. ನನ್ನ ಅಗತ್ಯ ಎಚ್.ಡಿ ಕುಮಾರಸ್ವಾಮಿ ಅವರಿಗೆ ಇದ್ದಂತಿಲ್ಲ. ಅಗತ್ಯವಿಲ್ಲದ ಕಡೆ ನಾನು ಯಾಕೆ ಇರಬೇಕು. ಕಳೆದ ಮೂರು ವರ್ಷಗಳಿಂದ ನಾನು ಮಾನಸಿಕವಾಗಿ ಬಿಜೆಪಿಯಲ್ಲೆ ಇದ್ದೇನೆ. ದೈಹಿಕವಾಗಿ ಅಷ್ಟೇ ಜೆಡಿಎಸ್ ನಲ್ಲಿದ್ದೆ. ವಿಧಾನ ಪರಿಷತ್ ಒಳಗೂ ನಾನು ಬಿಜೆಪಿ ಪರವೇ ಬಿಲ್ ಗಳಿಗೆ ಕೈ ಎತ್ತಿದ್ದೇನೆ. ಮೂರು ವರ್ಷದಿಂದ ನಾನು ಜೆಡಿಎಸ್ ನಾಯಕರ ಸಂರ್ಪಕದಲ್ಲಿ ಇಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಸಂದೇಶ್ ನಾಗರಾಜ್ ತಿಳಿಸಿದರು. : – – - . … “ 3 ”: , 12, 2021 (..): . . , . “ ,” .“ ’ .. . ? . . . . ,” .: / / /