ಟಾಲಿವುಡ್’ಗೆ ಪಾದಾರ್ಪಣೆ ಮಾಡುತ್ತಿದ್ದಾರೆ ದುನಿಯಾ ವಿಜಯ್ ! ಬೆಂಗಳೂರು, ನವೆಂಬರ್ 10, 2021 (..):ನಟ ದುನಿಯಾ ವಿಜಯ್ ಟಾಲಿವುಡ್ ಗೆ ಪಾದಾರ್ಪಣೆ ಮಾಡುತ್ತಿರುವ ಸುದ್ದಿ ಹೊರಬಿದ್ದಿದೆ. ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡುತ್ತಿರುವ ನಂದಮೂರಿ ಬಾಲಕೃಷ್ಣ ಅಭಿನಯದ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸುತ್ತಿದ್ದಾರೆ. ಈ ಸಿನಿಮಾಗೆ NB107 ಎಂದು ಹೆಸರಿಡಲಾಗಿದ್ದು, ಪಾತ್ರವರ್ಗದಲ್ಲಿ ಶ್ರುತಿ ಹಾಸನ್ ನಟಿಸುತ್ತಿದ್ದಾರೆ. ದುನಿಯಾ ವಿಜಯ್ ಈ ಸಿನಿಮಾದಲ್ಲಿ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ರಾಯಲಸೀಮೆ ಪ್ರಾಂತ್ಯದಲ್ಲಿ ಚಿತ್ರೀಕರಣ ನಡೆಯಲಿದ್ದು, ನೈಜ ಘಟನೆಯನ್ನು ಆಧರಿಸಿದ ಸಿನಿಮಾ ಇದಾಗಿದೆ ಎಂದು ಎನ್ನಲಾಗಿದೆ. ಆದರೆ ಈ ಕುರಿತು ಇನ್ನು ಅಧಿಕೃತವಾಗಿಲ್ಲ.