ದಾಂಪತ್ಯ ಜೀವನದಲ್ಲಿ ಬಿರುಕಿಲ್ಲ: ಗಾಸಿಪ್’ಗಳಿಗೆ ಉತ್ತರ ಕೊಟ್ಟ ಶಿಲ್ಪಾ ಶೆಟ್ಟಿ ಪೋಸ್ಟ್ ಮಾಡಿದ ಫೋಟೋ ಬೆಂಗಳೂರು, ನವೆಂಬರ್ 10, 2021 (..):ದಾಂಪತ್ಯ ಜೀವನ ಸಂಬಂಧ ನಟಿ ಶಿಲ್ಪಾ ಶೆಟ್ಟಿ ಮೌನವಾಗಿದ್ದುಕೊಂಡೇ ಎಲ್ಲರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಪತಿ ರಾಜ್​ ಕುಂದ್ರಾ ಜತೆಗೆ ಹಿಮಾಚಲ ಪ್ರದೇಶದ ಧರ್ಮಶಾಲಾದ ದೇವಸ್ಥಾನಕ್ಕೆ ತೆರಳಿರುವ ಅವರು, ಅದರ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದಾರೆ. ಬ್ಲೂ ಫಿಲ್ಮ್ಂ ಕೇಸ್‌ನಲ್ಲಿ ಸಿಲುಕಿದ್ದ ರಾಜ್‌ ಕುಂದ್ರಾ ಅವರನ್ನು ಕಳೆದ ಜುಲೈ 19ರಂದು ಬಂಧಿಸಲಾಗಿತ್ತು. ಸೆಪ್ಟೆಂಬರ್​ನಲ್ಲಿ ಅವರಿಗೆ ಜಾಮೀನು ಸಿಕ್ಕಿದೆ. ಇದಾದ ಬಳಿಕ ಇದೇ ಮೊದಲ ಬಾರಿಗೆ ದಂಪತಿ ಒಟ್ಟಾಗಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ತಮ್ಮ ದಾಂಪತ್ಯ ಜೀವನದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಪರೋಕ್ಷ ಸಂದೇಶ ರವಾನಿಸಿದ್ದಾರೆ.