ದೆಹಲಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ. ಬೆಂಗಳೂರು,ನವೆಂಬರ್,10,2021(..):ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದು, ಇಂದು ಅಲ್ಲೇ ವಾಸ್ತವ್ಯ ಹೂಡಿ ಕೇಂದ್ರ ಸಚಿವರನ್ನ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು 10 ಗಂಟೆ ವೇಳೆಗೆ ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಿದರು. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರಧಾನಿ ಮೋದಿ ಭೇಟಿಗೆ ಸಮಯ ಕೇಳಿದ್ದೇನೆ. ಪ್ರಧಾ ಮೋದಿ ಸಮಯ ನೀಡಿದರೇ ಭೇಟಿಯಾಗುವೆ ಎಂದರು. ಹಾಗೆಯೇ ದೆಹಲಿ ಪ್ರವಾಸದಲ್ಲಿ ಕೇಂದ್ರ ಸಚಿವರನ್ನ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸುತ್ತೇನೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿಯಾಗುವೆ. ಆದರೆ ದೆಹಲಿ ಭೇಟಿ ವೇಳೆ ನಿಗಮ ಮಂಡಳಿಗಳ ಅಧ್ಯಕ್ಷರ ಬದಲಾವಣೆ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ಮಾಡಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದರು. : - - -. … , 10, 2021 (..): . . 10.00 . . “ .. . , ’ ,” .: / /