ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಶಾಕ್: ಸಿಬಿಐ ತನಿಖೆಗೆ ಮನವಿ ಮಾಡಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಬೆಂಗಳೂರು,ಸೆಪ್ಟಂಬರ್,27,2024 (..):ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ ಐಆರ್ ದಾಖಲಾದ ಬೆನ್ನಲ್ಲೆ ಇದೀಗ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ಹಗರಣ ಸಂಬಂಧ ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿ ವಿಚಾರಣೆ ಸೋಮವಾರ ನಡೆಯುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ ಐಆರ್ ದಾಖಲು ಕುರಿತು ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ, ನಮ್ಮ ಹೋರಾಟಕ್ಕೆ ಈಗ ಜಯ ಸಿಕ್ಕಿದೆ. ಮೇಲಾಧಿಕಾರಿರಿಗಳಿಂದ ಒತ್ತಡ ಬಂದ ಬಳಿಕ ಎಫ್ ಐಆರ್ ದಾಖಲಾಗಿದೆ. ಸಿಬಿಐ ತನಿಖೆ ಆಗುವವರೆಗೂ ಹೋರಾಟ ಮಾಡುತ್ತೇವೆ. ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು. : , , ,