ಮೋದಿ, ಹೆಚ್.ಡಿಕೆ, ನಿರ್ಮಲಾ ಸೀತಾರಾಮನ್ ವಿರುದ್ದ ಪ್ರಕರಣ ದಾಖಲಿಸಲಿ-ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ಬೆಳಗಾವಿ,ಸೆಪ್ಟಂಬರ್,28, 2024(..):ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿರುವ ಬಿಜೆಪಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮೊದಲು ಪ್ರಧಾನಿ ಮೋದಿ, ನಿರ್ಮಲಾ ಸೀತಾರಾಮನ್ , ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಲಿ. ಸಿದ್ದರಾಮಯ್ಯ ಯಾವ ಕಾರಣಕ್ಕೂ ರಾಜೀನಾಮೆ ನೀಢಲ್ಲ ಕಾನೂನು ಪ್ರಕಾರ ಪ್ರಕರಣ ತನಿಖೆ ಆಗುತ್ತೆ. ರಾಜೀನಾಮೆ ಕೇಳುತ್ತಿರುವ ಬಿಜೆಪಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದರು. ಚುನಾವಣಾ ಬಾಂಡ್ ಕೇಸ್ ನಲ್ಲಿ ಎಫ್ ಐಆರ್ ದಾಖಲಿಸಲು ಸುಪ್ರೀಂಕೋರ್ಟ್ ಸೂಚಿಸಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಮೊದಲು ಅವರ ಮೇಲೆ ಪ್ರಕರಣ ದಾಖಲಿಸಲಿ ಎಂದು ಆಗ್ರಹಿಸಿದರು. : , , , ,