ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ. ಬೆಂಗಳೂರು,ನವೆಂಬರ್,8,2021(..):ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಜ್ಞರು ಮಾಹಿತಿ ನೀಡಿದ್ದಾರೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಮೈಸೂರು, ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಗಳವಾರದ ನಂತರ ಮಳೆ ಕಡಿಮೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. : - – - – .