ಮಹಾರಾಷ್ಟ್ರದ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 11 ಮಂದಿ ಕೋವಿಡ್ ಸೋಂಕಿತರು ಸಜೀವ ದಹನ ಮೈಸೂರು, ನವೆಂಬರ್ 7, 2021:ಮಹಾರಾಷ್ಟ್ರದ ಅಹಮದ್ ನಗರದಲ್ಲಿರುವ ಸಿವಿಲ್ ಆಸ್ಪತ್ರೆಯಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅನಾಹುತದಲ್ಲಿ 11 ಮಂದಿ ಕೊರೊನಾ ಸೋಂಕಿತರು ಜೀವಂತವಾಗಿ ದಹನವಾಗಿದ್ದಾರೆ. 17 ಮಂದಿ ಕೊರೊನಾ ಸೋಂಕಿತರು ದಾಖಲಾಗಿದ್ದ ತುರ್ತು ಚಿಕಿತ್ಸಾ ಘಟಕದಲ್ಲಿ ಸಂಭವಿಸಿದ ಆಗ್ನಿ ಅನಾಹುತದಲ್ಲಿ 11 ಮಂದಿ ದಹನವಾಗಿದ್ದಾರೆ. ಆಸ್ಪತ್ರೆಯಲ್ಲಿ ಹಿರಿಯ ನಾಗರೀಕರು ದಾಖಲಾಗಿದ್ದು, ಕೆಲವರು ವೆಂಟಿಲೇಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಕೊರೊನಾ ಸೋಂಕು ಹೆಚ್ಚಳವಾದ ನಂತರ ಕೊರೊನಾ ಸೋಂಕಿತರಿಗೆ ಎಂದೇ ನಿರ್ಮಿಸಲಾಗಿದ್ದ ವಾರ್ಡ್‍ನಲ್ಲಿ ಈ ದುರಂತ ಸಂಭವಿಸಿದೆ. ಮೇಲ್ನೋಟಕ್ಕೆ ಶಾರ್ಟ್ ಸಕ್ರ್ಯೂಟ್‍ನಿಂದ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.