ಕೊರೊನಾ ಮೀಟರ್: ದೇಶಾದ್ಯಂತ 10,853 ಹೊಸ ಕೋವಿಡ್ ಪ್ರಕರಣ ಪತ್ತೆ ಬೆಂಗಳೂರು, ನವೆಂಬರ್ 07, 2021 (..):ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 10,853 ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಸಂಬಂಧ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, 526 ಸೋಂಕಿತರು ಸಾವನ್ನಪ್ಪಿದ್ದಾರೆ.ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 10,853 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಅಂತೆಯೇ ಇದೇ ಅವಧಿಯಲ್ಲಿ 12,432 ಸೋಂಕಿತರು ಗುಣಮುಖರಾಗಿದ್ದಾರೆ. ಆ ಮೂಲಕ ದೇಶದಲ್ಲಿ ಕೋವಿಡ್ ನಿಂದ ಚೇತರಿಸಿಕೊಂಡವರ ಸಂಖ್ಯೆ 3,37,49, 900ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಬುಲೆಟಿನ್ ತಿಳಿಸಿದೆ.