ದೇಶದಲ್ಲಿ ಕೊರೋನಾ ಪ್ರಕರಣ ಇಳಿಕೆ: ಕಳೆದ 24 ಗಂಟೆಗಳಲ್ಲಿ 10,929 ಕೋವಿಡ್ ಪ್ರಕರಣ ಪತ್ತೆ. ನವದೆಹಲಿ,ನವೆಂಬರ್,6,2021(..):ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 10,929 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು ಕಳೆದ 24 ಗಂಟೆಗಳಲ್ಲಿ 392 ಮಂದಿ ಕೊರೋನಾಗೆ ಸಾವನ್ನಪ್ಪಿದ್ದಾರೆ. ಇದೇ ಅವಧಿಯಲ್ಲಿ ಸುಮಾರು 12,509 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿ ಈವರೆಗೆ ಕೋವಿಡ್ ನಿಂದ 4.60 ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಕೋವಿಡ್ ಸೋಂಕಿನಿಂದ 3.37 ಕೋಟಿ ಮಂದಿ ಗುಣಮುಖರಾಗಿದ್ದಾರೆ. ದೇಶಾದ್ಯಂತ ಈವರೆಗೆ 61.39 ಕೋಟಿ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.1.35ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.1.27ರಷ್ಟಿದೆ ಎಂದು ಅಂಕಿಅಂಶ ಹೇಳಿದೆ. ಸತತ 29 ದಿನಗಳಿಂದ ದಿನಂ ಪ್ರತಿ 20,000ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗುತ್ತಿದೆ. ಅಲ್ಲದೇ ಕಳೆದ 132 ದಿನಗಳಿಂದ ಪ್ರತಿದಿನ 50,000ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪತ್ತೆಯಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. : - – -10,929 - - … : 10,929 24 , 6, 2021 (..): . 10,929 24 . , 392 24 , 12,509 . -19 4.60 . , 3.37 . 61.39 1.35%. 1.27%. 29 , 20,000 50,000 152 .: / /