ನಾಳೆ ಮೈಸೂರು ವಿಶ್ವ ವಿದ್ಯಾನಿಲಯದ ಹೆತ್ತೂರು ಘಟಕ ಕಾಲೇಜು ಉದ್ಘಾಟನಾ ಸಮಾರಂಭ. ಮೈಸೂರು,ಅಕ್ಟೋಬರ್,5,2021(..):ನಾಳೆ ಮೈಸೂರು ವಿಶ್ವ ವಿದ್ಯಾನಿಲಯದ ಹೆತ್ತೂರು ಘಟಕ ಕಾಲೇಜು ಉದ್ಘಾಟನಾ ಸಮಾರಂಭ ನಡೆಯಲಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಮೈಸೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಉದ್ಘಾಟನೆ ನೆರವೇರಿಸಲಿದ್ದಾರೆ. ಕರ್ನಾಟಕ ಹೈಕೋರ್ಟ್ ನ ನ್ಯಾಯಾಧೀಶರಾದ ಹೆಚ್.ಪಿ ಸಂದೇಶ್ ಹಾಗೂ ಮೈಸೂರು ವಿವಿ ವಿಶ್ರಾಂತ ಕುಲಪತಿಗಳಾದ ಪ್ರೊ.ಕೆ.ಎಸ್ ರಂಗಪ್ಪ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಶಾಸಕ ಹೆಚ್.ಕೆ ಕುಮಾರಸ್ವಾಮಿ , ಕಾಲೇಜು ಇಲಾಖೆ ಜಂಟಿ ನಿರ್ದೇಶಕ ವೀರಭದ್ರಯ್ಯ , ಮೈಸೂರು ವಿವಿ ಸಿಂಡಿಕೇಟ್ ಸದಸ್ಯರಾದ ಎಂ.ಎಸ್ ದಾಮೋದರ ಮುಂತಾದವರು ಉಪಸ್ಥಿತರಿರಲಿದ್ದಾರೆ. : - – - - -.