ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ವ್ಯಾಟ್ ಇಳಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ. ಬೆಂಗಳೂರು,ನವೆಂಬರ್,4,2021(..):ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ವ್ಯಾಟ್ ಇಳಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದಾರೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸಲ್ ದರವನ್ನು ಕ್ರಮವಾಗಿ ರೂ 10 ಹಾಗೂ ರೂ 5 ಕ್ಕೆ ಇಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರವೂ ತಲಾ 7 ರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು. ಇದೀಗ ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದೆ. ಈಗ ರಾಜ್ಯದಲ್ಲಿ ಪೆಟ್ರೋಲ್ ದರ 100.63, ಡೀಸೆಲ್ ಬೆಲೆ 85.03 ಕ್ಕೆ ಬರಲಿದೆ ಒಟ್ಟಾರೆ ಪೆಟ್ರೋಲ್ ಮೇಲೆ 13.30 ರೂ ಕಡಿತವಾಗಲಿದೆ. ಡಿಸೇಲ್ ಮೇಲೆ 19.47 ರೂ ಕಡಿತವಾಗಲಿದೆ. : - - –-