ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆಯಲ್ಲಿ ನಕಲು ಪ್ರಕರಣ ಸಿಐಡಿಗೆ ಹಸ್ತಾಂತರ. ಬೆಂಗಳೂರು,ನವೆಂಬರ್,4,2021(..):ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ತಂತ್ರಜ್ಞಾನ ಬಳಸಿ ನಕಲು ಪ್ರಕರಣವನ್ನು ಗೃಹ ಇಲಾಖೆ ಸಿಐಡಿಗೆ ಹಸ್ತಾಂತರಿಸಿ ಆದೇಶಿಸಿದೆ. ಅಕ್ಟೋಬರ್ 24, ರಂದು ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಬ್ಲೂ ಟೂತ್ ಬಳಸಿ, ಪರೀಕ್ಷಾರ್ಥಿಗಳು ನಕಲಿಗೆ ಯತ್ನಿಸಿದ್ದರು. ಈ ಕುರಿತು ಖಚಿತ ಮಾಹಿತಿ ತಿಳಿದ ಪೊಲೀಸರು ಬೆಳಗಾವಿಯ ರಾಮತೀರ್ಥ ನಗರದಲ್ಲಿನ ಪರೀಕ್ಷಾ ಕೇಂದ್ರಕ್ಕೆ ದಾಳಿ ನಡೆಸಿ, 12 ಜನರನ್ನು ಬಂಧಿಸಿದ್ದರು. ಇವರಲ್ಲಿ ಇಬ್ಬರು ಪರೀಕ್ಷಾರ್ಥಿಗಳಾಗಿದ್ದರು. ಪ್ರಕರಣ ಸಂಬಂಧ 33 ಮೊಬೈಲ್, 9 ಮಾಸ್ಟರ್ ಕಾರ್ಡ್ ಡಿವೈಸ್, 13 ಬ್ಲೂಟೂತ್, ಮೂರು ಟ್ಯಾಬ್, ಒಂದು ಲ್ಯಾಪ್ ಟಾಪ್ ವಶಕ್ಕೆ ಪಡೆದಿದ್ದರು. ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳ ಕೈವಾಡವಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಇದೀಗ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಿರುವ ಗೃಹ ಇಲಾಖೆ ಪಿಸಿ ಪರೀಕ್ಷೆ ನಕಲು ಪ್ರಕರಣದಲ್ಲಿ ಪೊಲೀಸ್ ಸಿಬ್ಬಂದಿಗಳ ಕೈವಾಡದ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಪ್ರಕರಣವನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. : --- – . … , 4, 2021 (..): . 24. . , 12 , . 33 , 9 , 13 , , . . .: / /