ರಾಜ್ಯದಲ್ಲಿ ನ.8ರಿಂದ ಅಂಗನವಾಡಿ ಕೇಂದ್ರಗಳು ಓಪನ್: ಸರ್ಕಾರದಿಂದ ಗೈಡ್ ಲೈನ್ ಬಿಡುಗಡೆ. ಬೆಂಗಳೂರು,ನವೆಂಬರ್,3,2021(..):ರಾಜ್ಯದಲ್ಲಿ ಕೊರೋನಾ ಕಡಿಮೆಯಾದ ಹಿನ್ನೆಲೆ ಹಂತ ಹಂತವಾಗಿ ಶಾಲಾ ಕಾಲೇಜುಗಳನ್ನ ತೆರೆಯಲಾಗಿದ್ದು ಇದೀಗ ಅಂಗನವಾಡಿ ಕೇಂದ್ರಗಳನ್ನು ತೆರಯಲು ಸರ್ಕಾರ ಮುಂದಾಗಿದೆ. ನವೆಂಬರ್ 8 ರಿಂದ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನ ತೆರೆಯಲು ಅನುಮತಿ ನೀಡಲಾಗಿದ್ದು ಇದಕ್ಕೆ ರಾಜ್ಯ ಸರ್ಕಾರ ಗೈಡ್ ಲೈನ್ ಬಿಡುಗಡೆ ಮಾಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾರ್ಗಸೂಚಿ ಈ ಕೆಳಕಂಡಂತಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು. ಮಕ್ಕಳ ಪೋಷಕರು ಸಹ ಎರಡು ಡೋಸ್ ಲಸಿಕೆ ಪಡೆದಿರಬೇಕು. ಅಂಗನವಾಡಿ ಕೇಂದ್ರವನ್ನ ರಾಸಾಯನಿಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು. ಅಂಗನವಾಡಿ ಆರಂಭಿಸುವ ಮುನ್ನ ಸ್ಥಳೀಯ ಗ್ರಾಮಪಂಚಾಯಿತಿ ಗಮನಕ್ಕೆ ತರಬೇಕು. ಮಕ್ಕಳು ಅಂಗನವಾಡಿ ಕೇಂದ್ರಕ್ಕೆ ಹಾಜರಾಗಲು ಪೋಷಕರ ಅನುಮತಿ ಪತ್ರ ಕಡ್ಡಾಯ. ಕೋವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇದ್ದರೇ ಮಾತ್ರ ಅಂಗನವಾಡಿ ಕೇಂದ್ರ ತೆರೆಯಲು ಅವಕಾಶವಿರುತ್ತದೆ. : - - 8th – - - … 8: . , 3, 2021 (..): . . 8 . :• . .• .• .• ’ .• 2%.: -19 / ./ / / 8