ಮೈಸೂರಿನಲ್ಲಿ 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ. ಮೈಸೂರು,ನವೆಂಬರ್,1,2021(..):ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಮೈಸೂರು ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು. ಮೈಸೂರು ಅರಮನೆಯಲ್ಲಿ ತಾಯಿ ಭುವನೇಶ್ವರಿ ದೇವಿಗೆ ಉಸ್ತುವಾರಿ ಸಚಿವ ಎಸ್‌.ಟಿ ಸೋಮಶೇಖರ್ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗಣ್ಯರು ರಾಷ್ಟ್ರ ಹಾಗೂ ನಾಡ ಧ್ವಜಾರೋಹಣ ಮಾಡುವ ಮೂಲಕ ನಾಡಿನ ಜನರಿಗೆ ರಾಜ್ಯೋತ್ಸವ ಸಂದೇಶ ಸಾರಿದರು. ಈ ವೇಳೆ ಅಶ್ವಾರೋಹಿ ಹಾಗೂ ಪೊಲೀಸ್ ಸಿಬ್ಬಂದಿಗಳಿಂದ ಧ್ವಜ ವಂದನೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ 36 ಗಣ್ಯರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. : 66th– - –- - - . … 66th : - , 1, 2021 (..): 66th . - .. . . . 36 - .: 66th / / / -