ಅಪ್ಪು ಸ್ಮರಣಾರ್ಥ ‘ರಾಜಕುಮಾರ’ ರೀ ರಿಲೀಸ್: ಉಚಿತ ಪ್ರದರ್ಶನ ಬೆಂಗಳೂರು, ನವೆಂಬರ್ 1, 2021 (..):ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಹಿನ್ನೆಲೆಯಲ್ಲಿ ಇಂದು ಪುನೀತ್ ರಾಜ್ ಕುಮಾರ್ ನಟನೆಯ ರಾಜಕುಮಾರ ಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನ ಪದ್ಮನಾಭನಗರ ಬಳಿಯ ಗೌಡನಪಾಳ್ಯದ ಶ್ರೀನಿವಾಸ ಚಿತ್ರಮಂದಿರದಲ್ಲಿ ರಾಜಕುಮಾರ ಚಿತ್ರವನ್ನು ರೀ ರಿಲೀಸ್ ಮಾಡಲಾಗಿದೆ. ಎಲ್ಲರಿಗೂ ಉಚಿತ ಸಿನಿಮಾ ಪ್ರದರ್ಶನ ಏರ್ಪಡಿಸಲಾಗಿದೆ. ಇಂದು ಬೆಳಗ್ಗೆ 7.30 ರಿಂದ ರಾಜಕುಮಾರ ಚಿತ್ರ ಪ್ರದರ್ಶನ ಆಗುತ್ತಿದೆ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗಾಗಿ ಇಂದು ಸ್ಪೇಷಲ್ ಶೋ ಆಯೋಜಿಸಲಾಗಿದೆ.