ಇಂದು ಸಂಜೆಯೇ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ. ಬೆಂಗಳೂರು,ಅಕ್ಟೋಬರ್,30,2021(..):ಹೃದಯಾಘಾತದಿಂದ ನಿಧನರಾದ ನಟ ಪವರ್ ಸ್ಟಾ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಸಂಜೆಯೇ ನಡೆಯಲಿದೆ. ನಟ ಪುನೀತ್ ರಾಜ್ ಕುಮಾರ್ ಅವರ ಪುತ್ರಿ ಸಂಜೆ 4 ಗಂಟೆ ವೇಳೆಗೆ ಬೆಂಗಳೂರಿಗೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ಇಂದು ಸಂಜೆಯೇ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನೆರವೇರಲಿದೆ. ಈ ಕುರಿತು ಮಾಹಿತಿ ನೀಡಿದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಇಂದು ಸಂಜೆಯೇ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಪಾರ್ಥೀವ ಶರೀರದ ಮೆರವಣಿಗೆ ಪ್ರಾರಂಭವಾಗಲಿದ್ದು, 5 ರಿಂದ 5.30ರ ವೇಳೆಗೆ ಕಂಠೀರವ ಸ್ಟುಡಿಯೋಗೆ ಮೆರವಣಿಗೆ ತೆರಳಲಿದೆ. ಪುನೀತ್ ರಾಜ್ ಕುಮಾರ್ ಅವರ ಪುತ್ರಿ ಬರುವವರೆಗೆ ಪೂಜೆ ಮಾಡಲಾಗುತ್ತದೆ. ನಂತರ ಅಂತಿಮ ವಿಧಿ ವಿಧಾನ ನೆರವೇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. : - - - -