ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ ಹಿನ್ನೆಲೆ: ಸಿಎಂ ಬೊಮ್ಮಾಯಿ ಸೇರಿ ಗಣ್ಯಾತಿಗಣ್ಯರು ದೌಡು: ನಟ ಶಿವಣ್ಣ ಕಣ್ಣೀರು. ಬೆಂಗಳೂರು,ಅಕ್ಟೋಬರ್ ,29,2021(..):ಆರೋಗ್ಯ ಏರುಪೇರು ಉಂಟಾಗಿ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಇದೀಗ ಗಣ್ಯಾತಿಗಣ್ಯರು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ಗೆ ಐಸಿಯುನಲ್ಲಿ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಈ ವಿಚಾರ ತಿಳಿಯುತ್ತಿದ್ದಂತೆ ನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ಆಗಮಿಸಿದ್ದಾರೆ. ಇದೇ ವೇಳೆ ಪುನೀತ್ ರಾಜ್ ಕುಮಾರ್ ಅನಾರೋಗ್ಯ ಸುದ್ಧಿ ಕೇಳಿ ನಟ ಶಿವರಾಜ್ ಕುಮಾರ್ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ. ಹಾಗೆಯೇ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಆರ್.ಅಶೋಕ್, ಹಿರಿಯ ನಟ ರವಿಚಂದ್ರನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ಯಶ್, ನಿರ್ಮಾಪಕ ಜಯಣ್ಣ, ಶ್ರೀಕಾಂತ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಆಸ್ಪತ್ರೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ ಮಾಡಲಾಗಿದೆ. ಹಾಗೆಯೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಹ ಆಸ್ಪತ್ರೆಯತ್ತ ಆಗಮಿಸುತ್ತಿದ್ದಾರೆ. : - - - -