ನಟ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ. ಬೆಂಗಳೂರು,ಅಕ್ಟೋಬರ್,29,2021(..):ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ವಿಕ್ರಂ ಆಸ್ಪತ್ರೆಗೆ ದಾಖಲಾಗಿರುವ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಐಸಿಯುನಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪುನೀತ್ ರಾಜ್ ಕುಮಾರ್ ಅವರಿಗೆ ರಾತ್ರಿಯೇ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿತ್ತು ಎನ್ನಲಾಗಿತ್ತು. ನಂತರ ಬೆಳಿಗ್ಗೆ ಜಿಮ್ ಕಸರತ್ತು ವೇಳೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಮೊದಲು ರಮಣಶ್ರೀ ಆಸ್ಪತ್ರೆಗೆ ತೆರಳಿದ್ದರು. ನಂತರ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ವಿಚಾರ ತಿಳಿದ ತಕ್ಷಣ ನಟ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಅವರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ವಿಕ್ರಂ ಆಸ್ಪತ್ರೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ. ನಟ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳ ದಂಡೇ ಆಸ್ಪತ್ರೆಗೆ ಹರಿದು ಬರುತ್ತಿದೆ. : - - – - – .