ನಾಳೆ ಎರಡು ಜಿಲ್ಲೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರವಾಸ. ಬೆಂಗಳೂರು,ಅಕ್ಟೋಬರ್,29,2021(..):ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಿಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಚಿಕ್ಕಮಗಳೂರು ಹಾಸನ ಎರಡು ಜಿಲ್ಲೆಗಳಿಗೆ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಸಿಎಂ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹಾಗೆಯೇ ನಾಳೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯ ಶಾರದಾಂಬೆ ದೇವಾಲಯ ಹಾಗೂ ಹಾಸನದ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ನಾಳೆ ಸಂಜೆಯೇ ಸಿಎಂ ಬೊಮ್ಮಾಯಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಪ್ರಚಾರದಲ್ಲಿ ಸಿಎಂ ಬೊಮ್ಮಾಯಿ ತೊಡಗಿದ್ದರು. : - - – - - .